ಚಂಡೀಗಡ: ಪೌರತ್ವ ತಿದ್ದುಪಡಿ ಕಾಯ್ದೆ 2019 ತಾರತಮ್ಯ ಮತ್ತು ದೇಶದ ಸಂವಿಧಾನದ ಜಾತ್ಯತೀತ ತತ್ವದ ವಿರುದ್ಧವಾಗಿದ್ದು, ಅದನ್ನು ತಕ್ಷಣ ರದ್ದುಗೊಳಿಸುವಂತೆ ಕೋರಿ ಪಂಜಾಬ್ ವಿಧಾನಸಭೆಯು ಶುಕ್ರವಾರ ಧ್ವನಿ ಮತದಿಂದ ನಿರ್ಣಯ ಅಂಗೀಕರಿಸಿತು.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ಕಾಯ್ದೆಯನ್ನು 1930ರ ದಶಕದಲ್ಲಿ ಜರ್ಮನಿಯ ಹಿಟ್ಲರನ ಜನಾಂಗೀಯ ಮತ್ತು ಧಾರ್ಮಿಕ ಶುದ್ಧೀಕರಣ ವಾದಕ್ಕೆ ಹೋಲಿಸಿದ್ದಾರೆ. ಇದಕ್ಕೂ ಮೊದಲು ಕೇರಳ ಸರ್ಕಾರ ಕೂಡ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿತ್ತು.
ಪಂಜಾಬ್ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕಾರ
Follow Us