newsics.com
ದುಬೈ: ಚೆನ್ನೈ ವಿರುದ್ಧ ಪಂಜಾಬ್ 6 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ.
ನಾಯಕನ ಆಟವಾಡಿದ ಕೆ.ಎಲ್. ರಾಹುಲ್ (98*) ಬಿರುಸಿನ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಗುರುವಾರ ದುಬೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಫಾಫ್ ಡು ಪ್ಲೆಸಿ ಅರ್ಧಶತಕದ (76) ಹೊರತಾಗಿಯೂ ಆರು ವಿಕೆಟ್ ನಷ್ಟಕ್ಕೆ 134 ರನ್ಗಳನ್ನಷ್ಟೇ ಗಳಿಸಿತು.
ಪಂಜಾಬ್ ಕೇವಲ 13 ಓವರ್ಗಳಲ್ಲೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. 42 ಎಸೆತಗಳನ್ನು ಎದುರಿಸಿದ ರಾಹುಲ್ 98 ರನ್ ಗಳಿಸಿ ಔಟಾಗದೆ ಉಳಿದರು.