Sunday, July 3, 2022

ಪತಿಯೆಂದು ಪ್ರಿಯಕರನ ಜತೆ ಕ್ವಾರಂಟೈನ್ ಆದ ಮಹಿಳಾ ಪೊಲೀಸ್!

Follow Us

ನಾಗ್ಪುರ: ಪತಿಯೆಂದು ಸುಳ್ಳು ಹೇಳಿದ ನಾಗ್ಪುರದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ವಿವಾಹಿತ ಪ್ರಿಯಕರನ ಜತೆ ಕ್ವಾರಂಟೈನ್ ಆಗಿ ಸಿಕ್ಕಿಬಿದ್ದಿದ್ದಾರೆ.
ಕೊರೋನಾ ಸೋಂಕಿತ ವ್ಯಕ್ತಿಯ ಜತೆ ಸಂಪರ್ಕದಲ್ಲಿದ್ದ ಕಾರಣ ಮಹಿಳಾ ಕಾನ್’ಸ್ಟೇಬಲ್‍ನ್ನು ಕ್ವಾರಂಟೈನ್ ಆಗಲು ಆರೋಗ್ಯ ಅಧಿಕಾರಿಗಳು ಸೂಚಿಸಿದ್ದರು. ಈ ವೇಳೆ ನನ್ನ ಜತೆ ನನ್ನ ಪತಿಯನ್ನೂ ಕ್ವಾರಂಟೈನ್ ಮಾಡಬೇಕು ಎಂದು ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದರಿಂದ ಅನಿವಾರ್ಯವಾಗಿ ಇಬ್ಬರನ್ನೂ ಕ್ವಾರಂಟೈನ್ ಮಾಡಲಾಯಿತು. ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಕೆಯ ಪತಿ ಎಂದು ನಮೂದಿಸಿದ ವ್ಯಕ್ತಿ ಹಾಗೂ ಮಹಿಳಾ ಪೊಲೀಸ್ ಕಾನ್’ಸ್ಟೇಬಲ್ ನಾಗ್ಪುರದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಯಿತು.
ಆದರೆ ಮೂರು ದಿನಗಳ ಬಳಿಕ ಅವರಿಬ್ಬರೂ ಗಂಡ ಹೆಂಡತಿ ಅಲ್ಲ ಎಂಬುದು ಗೊತ್ತಾಯಿತು. ಪ್ರಿಯಕರನ ಪತ್ನಿ ತನ್ನ ಪತಿಯನ್ನು ಹುಡುಕಿಕೊಂಡು ಬಂದಾಗಲೇ ವಾಸ್ತವ ವಿಚಾರ ಬೆಳಕಿಗೆ ಬಂದಿದೆ. ಆಕೆಯ ಗಂಡ ಮಹಿಳಾ ಕಾನ್ ಸ್ಟೇಬಲ್ ಜತೆ ಸಂಬಂಧ ಹೊಂದಿರುವುದು ತಿಳಿದ ಆಕೆ ಪೊಲೀಸ್ ತರಬೇತಿ ಕೇಂದ್ರದ ಬಳಿ ಬಂದಿದ್ದಾರೆ. ಆದರೆ ಆಕೆಯನ್ನು ಸಿಬ್ಬಂದಿ ಗೇಟ್ ಒಳಗೆ ಬಿಟ್ಟಿಲ್ಲ. ಬೇರೆಯವಳ ಜತೆ ಕ್ವಾರಂಟೈನ್ ಆಗಿದ್ದ ಪತಿಯ ವಿರುದ್ಧ ಬಜಾಜ್ ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ದಾಖಲಿಸಿದ್ದಾಳೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!