ತಿರುವನಂತಪುರಂ: ಕೊರೋನಾ ಹಿನ್ನೆಲೆಯಲ್ಲಿ ಅಯ್ಯಪ್ಪ ಭಕ್ತರ ಸಂಖ್ಯೆಯನ್ನು ಕಡಿತಗೊಳಿಸಲು ಕೇರಳ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆ ದೇವಸ್ಥಾನದಲ್ಲಿ ಮಂಡಲ ಪೂಜೆ ಮತ್ತು ಮಕರ ವಿಳಕಂ ಸಂದರ್ಭದಲ್ಲಿ ಕೆಲವು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಎಷ್ಟು ಭಕ್ತರಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಮುಖ್ಯ ಕಾರ್ಯದರ್ಶಿ ನಿರ್ಧರಿಸಲಿದ್ದಾರೆ ಎಂದು ಕೇರಳ ಸರ್ಕಾರ ಹೇಳಿದೆ.
ದೇವಸ್ಥಾನಕ್ಕೆ ಬರುವ ಎಲ್ಲ ಅಯ್ಯಪ್ಪ ಭಕ್ತರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ.. ದೇವಸ್ಥಾನದ ಸಮೀಪದಲ್ಲಿ ಮತ್ತೆ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಎಂದು ಸರ್ಕಾರ ಸ್ಪಷ್ಟಪಡಿಸಿದೆ.