Monday, April 12, 2021

ಇಂದು ಆರ್ ಬಿ ಐ ಗವರ್ನರ್ ಮಹತ್ವದ ಪತ್ರಿಕಾಗೋಷ್ಟಿ

ಮುಂಬೈ:  ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಮಹತ್ವದ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ದೇಶದ ಆರ್ಥಿಕತೆಯ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಈಗಾಗಲೇ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಆರ್ ಬಿ ಐ ಈ ವಿಶೇಷ ಯೋಜನೆಯಲ್ಲಿ ವಹಿಸಲಿರುವ ಪಾತ್ರ ಮತ್ತು ಹಣದ ಹರಿವು ಖಾತರಿಪಡಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಶಕ್ತಿಕಾಂತ್ ದಾಸ್ ಮಾಹಿತಿ ನೀಡುವ ಸಾಧ್ಯತೆಗಳಿವೆ. ಕಳೆದ ಬಾರಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸಾಲದ ಮಾಸಿಕ ಕಂತು ಪಾವತಿಸುವ ಅವಧಿಯನ್ನು ಮೂರು ತಿಂಗಳ ಕಾಲ ಮುಂದೂಡುವ ಘೋಷಣೆ ಮಾಡಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ  ಹಲವು ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಆರ್ ಬಿ ಗವರ್ನರ್ ಪತ್ರಿಕಾಗೋಷ್ಠಿ ಕುತೂಹಲ ಕೆರಳಿಸಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!