Wednesday, July 6, 2022

ಬಜಾಜ್ ಫೈನಾನ್ಸ್‌ನ ಇಸಿ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ

Follow Us

♦ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಸಂಜೀವ್ ಬಜಾಜ್ ನೇಮಕ

ನವದೆಹಲಿ: ಬಜಾಜ್ ಫೈನಾನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ಉದ್ಯಮಿ ರಾಹುಲ್ ಬಜಾಜ್ ರಾಜೀನಾಮೆ ನೀಡಿದ್ದಾರೆ.
ರಾಹುಲ್ ಬಜಾಜ್ ಅವರು ಜುಲೈ 31ರಿಂದ ಈ ರಾಜೀನಾಮೆ ಅನ್ವಯವಾಗಲಿದೆ. ಮೂರು ದಶಕಗಳ ಕಾಲ ಕಂಪನಿಯ ಚುಕ್ಕಾಣಿ ಹಿಡಿದಿದ್ದ

ಸಂಜೀವ್ ಬಜಾಜ್

ರಾಹುಲ್ ಬಜಾಜ್, ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಜಾಜ್ ಫೈನಾನ್ಸ್ ಉಪಾಧ್ಯಕ್ಷರಾಗಿರುವ ಸಂಜೀವ್ ಬಜಾಜ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಬಜಾಜ್ ಫೈನಾನ್ಸ್ ತಿಳಿಸಿದೆ. 2020 ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಸಂಜೀವ್ ಬಜಾಜ್ ಅವರನ್ನು ನೇಮಕ ಮಾಡಲು ಕಂಪನಿಯ ನಿರ್ದೇಶಕ ಮಂಡಳಿ ಅನುಮೋದನೆ ನೀಡಿದೆ.
ಬಜಾಜ್ ಫೈನಾನ್ಸ್ 1987ರಲ್ಲಿ ಪ್ರಾರಂಭವಾದಾಗಿನಿಂದ ಕಂಪನಿಯ ಚುಕ್ಕಾಣಿ ಹಿಡಿದಿದ್ದ ರಾಹುಲ್ ಬಜಾಜ್ ಅವರು ಇನ್ನು ಮುಂದೆ ಕಾರ್ಯನಿರ್ವಾಹಕೇತರ ಸ್ವತಂತ್ರ ನಿರ್ದೇಶಕರಾಗಿ ಮುಂದುವರೆಯಲಿದ್ದಾರೆ ಎಂದು ಕಂಪನಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...
- Advertisement -
error: Content is protected !!