newsics.com
ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಖ್ಯಾತ ಕ್ರಿಕೆಟ್ ಆಟಗಾರ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸುದ್ದಿು ಸಂಸ್ಥೆಯೊಂದು ವರದಿ ಮಾಡಿದೆ. ಈ ಸಂಬಂಧ ಅಧಿಕೃತ ಹೇಳಿಕೆಯನ್ನು ಬಿಸಿಸಿಐ ಬಿಡುಗಡೆ ಮಾಡಿಲ್ಲ.
ರವಿಶಾಸ್ತ್ರಿ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರನ್ನು ಪರಿಗಣಿಸಲಾಗಿದೆ ಎಂದು ವರದಿಯಾಗಿದೆ.
ಈ ಹಿಂದೆ ಅನಿಲ್ ಕುಂಬ್ಳೆ ಅವರ ಹೆಸರು ಈ ಸ್ಥಾನಕ್ಕೆ ಕೇಳಿ ಬಂದಿತ್ತು.