ವಯನಾಡ್: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿರುವ ರಾಹುಲ್ ಗಾಂಧಿ ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟಕ್ಕೆ ಧುಮುಕಿದ್ದಾರೆ. ಕಲ್ಪೆಟದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದೆ. ಕಾಂಗ್ರೆಸ್ ಅಂಗಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದೆ. ಯಾವುದೇ ರಾಜಕೀಯ ಪಕ್ಷದ ಧ್ವಜ ಬಳಸದೇ ಕೇವಲ ರಾಷ್ಟ್ರ ಧ್ವಜ ಮಾತ್ರ ಪ್ರತಿಭಟನೆಯಲ್ಲಿ ಬಳಸಲಾಗುತ್ತಿದೆ.ಕೇರಳದಲ್ಲಿ ಎಡಪಕ್ಷಗಳು ಪೌರತ್ವ ಕಾನೂನು ವಿರೋಧಿ ಹೋರಾಟದಲ್ಲಿ ರಾಜಕೀಯ ಮೇಲುಗೈ ಸಾಧಿಸಿವೆ ಎಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ರಾಹುಲ್ ಗಾಂಧಿ ಕಾಂಗ್ರೆಸ್ ಹೋರಾಟದ ನೇತೃತ್ವ ವಹಿಸಿದ್ದಾರೆ.