newsics.com
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಲಾಗಿದೆ. ಟ್ವಿಟರ್ ನ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಖಾತೆಯನ್ನು ಅಮಾನತು ಮಾಡಲಾಗಿತ್ತು.
ಅತ್ಯಾಚಾರಕ್ಕೆ ಗುರಿಯಾಗಿದ್ದ ಬಾಲಕಿಯೊಬ್ಬಳ ಪೋಷಕರ ಚಿತ್ರವನ್ನು ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದರು. ಇದು ಕಾನೂನು ಉಲ್ಲಂಘನೆಯಾದ ಕಾರಣ ಖಾತೆ ಅಮಾನತು ಮಾಡಲಾಗಿತ್ತು.
ಟ್ವಿಟರ್ ಖಾತೆ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.