newsics.com
ನೊಯ್ಡಾ(ಉತ್ತರ ಪ್ರದೇಶ): ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಗುರುವಾರ ಹತ್ರಾಸ್‌ಗೆ ಹೊರಟಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ವೇಳೆ ತಳ್ಳಾಟದಲ್ಲಿ ರಾಹುಲ್ ಗಾಂಧಿ ಮುಗ್ಗರಿಸಿ ಬಿದ್ದ ಘಟನೆಯೂ ಯಮುನಾ ಎಕ್ಸ್ಪ್ರೆಸ್ ಹೈವೇ ನಲ್ಲಿ ನಡೆದಿದೆ. ಪೊಲೀಸರು ತಮ್ಮನ್ನು ತಳ್ಳಿ ಬೀಳಿಸಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.
ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸೇರಿದಂತೆ ನೂರಾರು ಕಾರ್ಯಕರ್ತರೊಂದಿಗೆ ಹತ್ರಾಸ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿಯವರ ವಾಹನಗಳನ್ನು ಪೊಲೀಸರು ಗ್ರೇಟರ್ ನಾಯ್ಡಾ ಬಳಿ ಪರಿಚೌಕದಲ್ಲಿ ತಡೆದಿದ್ದರು. ಬಳಿಕ ರಾಹುಲ್ ಹಾಗೂ ಪ್ರಿಯಾಂಕ ಅವರನ್ನು ಪೊಲೀಸ್ ವಾಹನದಲ್ಲಿ ಗೆಸ್ಟ್ ಹೌಸ್ ಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ತಳ್ಳಾಟದಲ್ಲಿ ಮುಗ್ಗರಿಸಿಬಿದ್ದ ರಾಹುಲ್
Follow Us