Tuesday, July 5, 2022

ರಾಜೀವ್ ಗಾಂಧಿ ಹಂತಕಿ ನಳಿನಿ ಜೈಲಿನಲ್ಲೇ ಆತ್ಮಹತ್ಯೆ ಯತ್ನ

Follow Us

ವೆಲ್ಲೂರು: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಶ್ರೀಹರನ್ ಸೋಮವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನಳಿನಿ ಅವರ ವಕೀಲರಾದ ಪುಗಲೆಂತಿ ಈ ವಿಷಯ ಖಚಿತಪಡಿಸಿದ್ದಾರೆ. ನಳಿನಿ ಅವರನ್ನು ವೆಲ್ಲೂರು ಮಹಿಳಾ ಜೈಲಿನಲ್ಲಿ ಇರಿಸಲಾಗಿದ್ದು, ಕಳೆದ 29 ವರ್ಷಗಳಿಂದ ಜೈಲಿನಲ್ಲಿದ್ದಾರೆ.
ಕಳೆದ 29 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನಳಿನಿ ಶ್ರೀಹರನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪುಗಲೆಂತಿ ಹೇಳಿದ್ದಾರೆ. ನಳಿನಿ ಮತ್ತು ಸಹ ಕೈದಿ ನಡುವೆ ಜಗಳವಾಗಿದ್ದು, ಈ ವಿಷಯವನ್ನು ಜೈಲರ್‌ಗೆ ತಿಳಿಸಿದಾಗ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಇನ್ನಿಲ್ಲ

ನಳಿನಿ ಅವರ ಪತಿ ಮುರುಗನ್ ಅವರು ವಕೀಲರಿಗೆ ಜೈಲು ಕರೆಯ ಮೂಲಕ ನಳಿನಿಯನ್ನು ವೆಲ್ಲೂರು ಜೈಲಿನಿಂದ ಪುಲಝಲ್ ಜೈಲಿಗೆ ಸ್ಥಳಾಂತರಿಸುವಂತೆ ಕೋರಿದ್ದಾರೆ ಎಂದು ಪುಗಲೆಂತಿ ಹೇಳಿದ್ದಾರೆ. ಇದಕ್ಕಾಗಿ ಕಾನೂನು ವಿನಂತಿಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ವಕೀಲರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ

newsics.com ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ  ಕುಸಿತ ಸಂಭವಿಸಿದೆ. ರಸ್ತೆಗೆ ಮಣ್ಣಿನ ರಾಶಿ...

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ  ವರ್ಗಾಯಿಸಲಾಗಿದೆ. ಶಿವಮೊಗ್ಗದ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
- Advertisement -
error: Content is protected !!