ನವದೆಹಲಿ: ಭಾರತ- ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎರಡು ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಆರಂಭಿಸಿದ್ದಾರೆ. ಇಂದು ಮುಂಜಾನೆ ರಾಜನಾಥ್ ಸಿಂಗ್ ಲೇಹ್ ಗೆ ತೆರಳಿದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭೂ ಸೇನಾ ಮುಖ್ಯಸ್ಥ ಎಂ ಎಂ ನರ್ವಾಣೆ ರಾಜನಾಥ್ ಸಿಂಗ್ ಅವರ ಜತೆ ಲೇಹ್ ಗೆ ತೆರಳಿದ್ದಾರೆ.
ವಾಸ್ತವ ನಿಯಂತ್ರಣ ರೇಖೆಯಲ್ಲಿ ಸೇನಾ ಹಿಂತೆಗೆತಕ್ಕೆ ಭಾರತ ಮತ್ತು ಚೀನಾ ಸಮ್ಮತಿಸಿದ್ದರೂ, ಚೀನಾ ಗುರುವಾರ ಮತ್ತೆ ತಕರಾರು ತೆಗೆದಿದೆ. ಭಾರತ ಸೂಚಿಸಿರುವ ಕೆಲವು ಪ್ರದೇಶಗಳಿಂದ ಸೇನಾ ಹಿಂತೆಗೆತಕ್ಕೆ ಚೀನಾ ತಕರಾರು ತೆಗೆದಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಸೇನಾ ಅಧಿಕಾರಿಗಳು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಜತೆ ಮಾತುಕತೆ ನಡೆಸಿದ್ದಾರೆ.
ಸೇನಾ ಹಿಂತೆಗೆತ ವಿಷಯಕ್ಕೆ ಸಂಬಂಧಿಸಿದಂತೆ ಚೀನಾ ಮಾತು ತಪ್ಪಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿನ ಪರಿಸ್ಥಿತಿ ಕುರಿತು ಭಾರತ ಸತತ ನಿಗಾ ವಹಿಸಿದೆ