ತಿರುವನಂತಪುರ: ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಕೋಝಿಕೋಡ್ ನಲ್ಲಿ ಕೇರಳ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಗುಹಾ, ವೈಯಕ್ತಿಕವಾಗಿ ತಾನು ರಾಹುಲ್ ಗಾಂಧಿ ಅವರನ್ನು ವಿರೋಧಿಸುತ್ತಿಲ್ಲ. ಆದರೆ ಯುವ ಭಾರತ, ಗಾಂಧಿ ಪರಿವಾರದ ಐದನೇ ತಲೆಮಾರಿನ ವ್ಯಕ್ತಿಯೊಬ್ಬನನ್ನು ನಾಯಕನಾಗಿ ಒಪ್ಪುವ ಮನೋಸ್ಥಿತಿಯಲ್ಲಿ ಇಲ್ಲ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕೇರಳಿಯರು ಯಾಕೆ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ. ಲೋಕಸಭೆಗೆ ನಡೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಆಯ್ಕೆಯಾಗಿದ್ದರು