Tuesday, April 13, 2021

ಕಾಗ್ನಿಜಂಟ್ ಚೇರ್ಮನ್ ಹುದ್ದೆ ತೊರೆದ ರಾಮ್’ಕುಮಾರ್

ನವದೆಹಲಿ: ಕಾಗ್ನಿಜಂಟ್’ನ ಚೇರ್ಮನ್, ವ್ಯವಸ್ಥಾಪಕ ರಾಮ್ ಕುಮಾರ್ ರಾಮಮೂರ್ತಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಸಿಇಒ ಬ್ರಿಯಾನ್ ಹಂಫ್ರಿಯಿಸ್ ತಿಳಿಸಿದ್ದಾರೆ.
ಸಿಇಒ ಆಗಿ ಬ್ರಿಯಾನ್ ಹಂಫ್ರಿಯಿಸ್ ಅವರು ಕಳೆದ ವರ್ಷ ಅಧಿಕಾರಕ್ಕೆ ಬಂದ ಬಳಿಕ ಅನೇಕ ಹಿರಿಯ ಅಧಿಕಾರಿಗಳು ಹುದ್ದೆಗಳನ್ನು ತೊರೆಯುತ್ತಿದ್ದಾರೆ. 2019ರಲ್ಲಿ ಸಿಎಂಡಿ ಸ್ಥಾನ ವಹಿಸಿಕೊಂಡಿದ್ದ ರಾಮ್ ಕುಮಾರ್ ಅವರು 10 ತಿಂಗಳೊಳಗೆ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ರಾಮ್ ಕುಮಾರ್ ಅವರು 22 ವರ್ಷ ಕಾಗ್ನಿಜಂಟ್ ಸಂಸ್ಥೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಹಿರಿಯ ಉಪಾಧ್ಯಕ್ಷ, ಕಾರ್ಯಕಾರಿ ನಿರ್ದೇಶಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ನಾಸ್ಕಾಂ ಸ್ಕಿಲ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿದ್ದರು. ಮದ್ರಾಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಅಧ್ಯಕ್ಷರಾಗಿದ್ದಾರೆ.
ಕುಂಭಕೋಣಂ ಮೂಲದ ರಾಮ್ ಕುಮಾರ್ ಅವರು ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಸಮೂಹ ಸಂವಹನದಲ್ಲಿ ಪತ್ರಿಕೋದ್ಯಮ ಪದವಿಯನ್ನು 1990ರಲ್ಲಿ ಲೊಯೊಲಾ ಕಾಲೇಜಿನಿಂದ ಪಡೆದಿದ್ದರು. ಅಮೆರಿಕನ್ ನ್ಯೂ ಜರ್ನಲಿಸಂನಲಿ ಎಂ.ಫಿಲ್ ಪಡೆದಿದ್ದಾರೆ. ಇಂಗ್ಲೀಷ್ ಪ್ರಾಧ್ಯಾಪಕ, ಪ್ರಿನ್ಸಿಪಾಲ್ ಆಗಿ ಕೂಡಾ ಕಾರ್ಯನಿರ್ವಹಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!