Tuesday, October 4, 2022

ಅತ್ಯಾಚಾರ ಆರೋಪ: ಸಬ್ ಇನ್ಸ್ ಪೆಕ್ಟರ್ ಬಂಧನ

Follow Us

Newsics.com

ನವದೆಹಲಿ: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು  ಪುನೀತ್ ಗ್ರೇವಾಲ್ ಎಂದು ಗುರುತಿಸಲಾಗಿದೆ. ಆರೋಪಿ ಪುನೀತ್ ದೆಹಲಿಯ ವಿಶೇಷ ಪೊಲೀಸ್ ದಳದಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಾಲ್ಕು ಮಹಿಳೆಯರು ಆರೋಪಿ ಪುನೀತ್ ವಿರುದ್ದ ದೂರು ನೀಡಿದ್ದಾರೆ.  ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿದ್ದ ಮಹಿಳೆಯೊಬ್ಬರು ತಾವು ಅನುಭವಿಸಿದ್ದ ಕಿರುಕುಳವನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದರು. ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ, ವಿಳಾಸ ಕೇಳುವ ನೆಪದಲ್ಲಿ ಹತ್ತಿರ ಬಂದ ಆರೋಪಿ, ತಮ್ಮ ಜತೆ ಅಸಭ್ಯವಾಗಿ ವರ್ತಿಸಿದ್ದ ಎಂದು ಅವರು ಆರೋಪಿಸಿದ್ದರು.

ಆರೋಪಿ ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದ. ಆ ಕಾರು ನೋಂದಣಿ ಸಂಖ್ಯೆ ಹೊಂದಿರಲ್ಲಿಲ್ಲ. ಬಳಿಕ ಕಾರು ಪತ್ತೆ ಹಚ್ಚಲು 200 ಸಿಸಿಟಿವಿ ದ್ಯಶ್ಯಗಳನ್ನು ಪರಿಶೀಲಿಸಲಾಗಿತ್ತು. 200ಕ್ಕೂ ಹೆಚ್ಚು ಸಿಬ್ಬಂದಿಯನ್ನು  ತನಿಖೆಗಾಗಿ ನಿಯೋಜಿಸಲಾಗಿತ್ತು. ಅಂತಿಮವಾಗಿ ಆಱೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಹಿಂದೆಯೂ ಕೂಡ ಆರೋಪಿ ಸಬ್ ಇನ್ಸ್ ಪೆಕ್ಟರ್ ವಿರುದ್ಧ ದೂರುಗಳು ಕೇಳಿ ಬಂದಿದ್ದವು ಎಂದು ಆರೋಪಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!