newsics.com
ಮುಂಬೈ: ರೈಲಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್ ಸಿ ಬಿ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ.
ಪಾರ್ಲಿ ರೈಲು ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹೈದರಾಬಾದ್ ನಿಂದ ಪುಣೆಗೆ ಪ್ರಯಾಣಿಸುತ್ತಿದ್ದ ವೇಳೆ ಅಧಿಕಾರಿ ಮಹಿಳೆಯೊಬ್ಬರ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಅಧಿಕಾರಿಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಪಾಟೀಲ್ ತಿಳಿಸಿದ್ದಾರೆ