ಭೋಪಾಲ್: ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದಂತಹ ಹೀನ ಕೃತ್ಯ ಮಧ್ಯಪ್ರದೇಶದಿಂದಲೂ ವರದಿಯಾಗಿದೆ. ಮಧ್ಯಪ್ರದೇಶದ ನರಸಿಂಗಪುರದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಲಾಗಿದೆ. ಈ ಸಂಬಂಧ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ.
ಇದೀಗ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣವನ್ನು ಮಧ್ಯಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಠಾಣೆಯ ಪೊಲೀಸ್ ಅಧಿಕಾರಿ ಸೇರಿದಂತೆ ಹಲವರನ್ನು ಅಮಾನತು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.