newsics.com
ಚಂಡೀಘರ್: ಉತ್ತರ ಪ್ರದೇಶದಲ್ಲಿ ನಡೆದ ಎರಡು ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬೆನ್ನಲ್ಲೇ ಹರಿಯಾಣದಲ್ಲೂ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಹರಿಯಾಣದ ಫರಿದಾಬಾದ್’ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ 25 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ. ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಫರಿದಾಬಾದ್ ಎಸಿಪಿ ಧರ್ಣಾ ಯಾದವ್ ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶದಲ್ಲೂ 16ರ ಬಾಲೆ ಮೇಲೆ ಸಾಮೂಹಿಕ ಅತ್ಯಾಚಾರ
ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಕಳೆದ ರಾತ್ರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹತ್ರಾಸ್ ಕೇಸ್ ಬೆನ್ನಲ್ಲೇ ಯುಪಿಯಲ್ಲಿ ಮತ್ತೊಂದು ರೇಪ್ ಅಂಡ್ ಮರ್ಡರ್
ಈ ಮಧ್ಯೆ, ಪವಿತ್ರ ಭೂಮಿ ಭಾರತ ಈಗ ಅತ್ಯಾಚಾರಿಗಳ ನಾಡಾಗಿದೆ. ಇಲ್ಲಿ ಪ್ರತಿ 15 ನಿಮಿಷಕ್ಕೊಮ್ಮೆ ಅತ್ಯಾಚಾರ ನಡೆಯುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅತ್ಯಾಚಾರ ಪ್ರಕರಣವೊಂದರ ಕುರಿತಂತೆ ಮದ್ರಾಸ್ ಹೈಕೋರ್ಟ್ನಲ್ಲಿ ಗುರುವಾರ ನಡೆದ ವಿಚಾರಣೆ ವೇಳೆ ನ್ಯಾಯಾಧೀಶರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನ್‌ಲಾಕ್; ಈಗ 16 ದೇಶಗಳಿಗೆ ವಿಮಾನಯಾನ ಸಾಧ್ಯ
ತಳ್ಳಾಟದಲ್ಲಿ ಮುಗ್ಗರಿಸಿಬಿದ್ದ ರಾಹುಲ್