ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 926 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಜನವರಿ 16 ರೊಳಗೆ rbi.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
20 ರಿಂದ 28 ವರ್ಷದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ ಶೇ.50ರಷ್ಟು ಅಂಕ ಹೊಂದಿರಬೇಕು. ಫೆಬ್ರವರಿ 14 ಮತ್ತು 15ರಂದು ಆನ್ಲೈನ್ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಸಾಮಾನ್ಯ ಒಬಿಸಿ ಹಾಗೂ ಇಡಬ್ಲ್ಯೂಎಸ್ ವರ್ಗಕ್ಕೆ ಅರ್ಜಿ ಶುಲ್ಕ 450 ರೂ. ನಿಗದಿಪಡಿಸಲಾಗಿದೆ. ಮೀಸಲು ವರ್ಗಕ್ಕೆ 50 ರೂ. ನಿಗದಿಪಡಿಸಲಾಗಿದೆ.
RBI 926 ಸಹಾಯಕ ಹುದ್ದೆಗಳಿಗೆ ಅರ್ಜಿ
Follow Us