Friday, May 20, 2022

ಹೈದರಾಬಾದ್ ವಿರುದ್ಧ ಆರ್’ಸಿಬಿ ಜಯ

Follow Us

newsics.com
ಆಬುಧಾಬಿ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿ ಬಿ 10 ರನ್ ಗಳ ಅಂತರದ ಜಯ ಗಳಿಸಿದೆ.
ಐಪಿಎಲ್ ನ ಮೂರನೇ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಆರ್ ಸಿ ಬಿ 5 ವಿಕೆಟ್ ನಷ್ಟಕ್ಕೆ 164 ರನ್ ಗುರಿ ನೀಡಿತ್ತು. ಆರ್ ಸಿ ಬಿ ಆತ್ಮವಿಶ್ವಾಸದಿಂದಲೇ ಗುರಿಯನ್ನು ಬೆನ್ನತ್ತಿತು. ಸನ್ ರೈಸರ್ಸ್ ಹೈದರಾಬಾದ್ 153 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲನ್ನನುಭವಿಸಿತು. ಸನ್ ರೈಸರ್ಸ್ ಹೈದರಾಬಾದ್ ಪರ ಚಾಹಲ್ 4 ಓವರ್ ನಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದು ಗೆಲುವಿನನಲ್ಲಿ ಪ್ರಮುಖ ಪಾತ್ರ ವಹಿಸಿದರು. ನವದೀಪ್ ಸೈನಿ ಹಾಗೂ ಶಿವಂ ದುಬೆ ತಲಾ 2 ವಿಕೆಟ್ ಪಡೆದು ಚಾಹಲ್ ಅವರಿಗೆ ಸಾಥ್ ನೀಡಿದರು. ಸನ್ ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಕೇವಲ 6 ರನ್ ಗೆ ಔಟಾದರು.

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!