Wednesday, October 28, 2020

ರಾಜಸ್ಥಾನ ರಾಯಲ್ಸ್ ವಿರುದ್ಧ RCBಗೆ ರೋಚಕ ಗೆಲುವು

newsics.com
ದುಬೈ: ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಸೇರಿಸಿತ್ತು.
ರಾಯಲ್ಸ್ ನೀಡಿದ 178 ರನ್ ಗಳ ಗುರಿ ಬೆನ್ನಟ್ಟಿದ ಬೆಂಗಳೂರು ತಂಡಕ್ಕೆ ಆಸರೆಯಾಗಿದ್ದು ಡಿವಿಲಿಯರ್ಸ್. ಹೌದು 22 ಎಸೆತಗಳಲ್ಲಿ ಅಜೇಯ 55 ರನ್ ಬಾರಿಸಿ ಗೆಲುವಿನ ದಡ ಸೇರಿಸಿದರು.
ಆರ್ ಸಿಬಿ ಪರ ಪಡಿಕ್ಕಲ್ 35, ಆರೋನ್ ಪಿಂಚ್ 14, ಕೊಹ್ಲಿ 43, ಡಿವಿಲಿಯರ್ಸ್ ಅಜೇಯ 55 ಮತ್ತು ಗುರ್ಕೀರತ್ ಸಿಂಗ್ ಅಜೇಯ 19 ರನ್ ಸೇರಿಸಿದ್ದಾರೆ. ರಾಯಲ್ಸ್ ಪರ ಬ್ಯಾಟಿಂಗ್ ನಲ್ಲಿ ರಾಬಿನ್ ಉತ್ತಪ್ಪ 41, ಬೆನ್ ಸ್ಟೋಕ್ಸ್ 15, ಸ್ಟೀವ್ ಸ್ಮಿತ್ 57, ಜೋಸ್ ಬಟ್ಲರ್ 24, ರಾಹುಲ್ ತೆವಾಟಿಯಾ ಅಜೇಯ 19 ರನ್ ಗಳಿಸಿದ್ದಾರೆ. ಈ ಪಂದ್ಯ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಆರ್ ಸಿಬಿ 9 ಪಂದ್ಯಗಳಲ್ಲಿ 6 ಪಂದ್ಯ ಗೆದ್ದು ಬೀಗಿದೆ.

ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್’ಗೆ ಜಯ

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!