Wednesday, July 6, 2022

ಮುಂಬೈನಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

Follow Us

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕುಂಭ ದ್ರೋಣ ಮಳೆಯಾಗುತ್ತಿದೆ. ಕಳೆದ 10 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮುಂಬೈ ನಗರದಲ್ಲಿ ಎಲ್ಲ ಕಚೇರಿಗಳನ್ನು ಬಂದ್ ಮಾಡುವಂತೆ ಮುಂಬೈ ಮಹಾನಗರ ಪಾಲಿಕೆ ಆದೇಶ ನೀಡಿದೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳಿಗೆ ಇದು ಅನ್ವಯಿಸಲಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಹೇಳಿದೆ. ಇದೇ ವೇಳೆ ಸಮುದ್ರದಲ್ಲಿ  ಭಾರಿ ಎತ್ತರದ ಅಲೆಗಳು ಸೃಷ್ಟಿಯಾಗಲಿದೆ ಎಂಬ ಎಚ್ಚರಿಕೆ ನೀಡಲಾಗಿದೆ.

ಈ ಮಧ್ಯೆ ಮಕಾರ್ ಬಳಿ ವೆಸ್ಟರ್ನ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದ ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದೆ. ವಾಹನಗಳು ಜಖಂಗೊಂಡಿದ್ದು, ಸಂಚಾರ ಪುನರಾರಂಭಕ್ಕೆ ಕಾರ್ಯಾಚರಣೆ ಆರಂಭಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!