Sunday, July 3, 2022

ನನ್ನ ವಿರುದ್ಧ ಆ ಗ್ಯಾಂಗ್ ಕೆಲಸ ಮಾಡುತ್ತಿದೆ ಎಂದ ರೆಹಮಾನ್

Follow Us

ಮುಂಬೈ: ನಾನು ಒಳ್ಳೆಯ ಚಲನಚಿತ್ರಗಳನ್ನು ಬೇಡವೆಂದು ಹೇಳುವುದಿಲ್ಲ, ಆದರೆ ಒಂದು ಗ್ಯಾಂಗ್ ಆ ಇಡೀ ಗ್ಯಾಂಗ್ ನನ್ನ ವಿರುದ್ಧ ಕೆಲಸ ಮಾಡುತ್ತಿದೆ…
ಹೀಗೆಂದವರು ಸಂಗೀತ ನಿರ್ದೇಶಕ ಎ.ಆರ್. ರಹಮಾನ್. ರೇಡಿಯೊ ಮಿರ್ಚಿಯೊಂದಿಗೆ ಮಾತನಾಡುವ ವೇಳೆ ಈ ಸ್ಫೋಟಕ ಮಾಹಿತಿ ನೀಡಿರುವ ಅವರು, ತಾವೇಕೆ ಈ ದಿನಗಳಲ್ಲಿ ಕಡಿಮೆ ಬಾಲಿವುಡ್ ಚಿತ್ರಗಳಿಗೆ ಸಂಗೀತ ಸಂಯೋಜಿಸುತ್ತಿದ್ದೇನೆ ಎಂಬ ಬಗ್ಗೆ ಹೀಗೆ ಹೇಳಿದ್ದಾರೆ.
‘ದಿಲ್ ಬೆಚರಾ’ ನಿರ್ದೇಶಕರಿಗೆ ಸಹ ನನ್ನ ಜತೆ ಕೆಲಸ ಮಾಡದಂತೆ ಆ ಗ್ಯಾಂಗ್ ಎಚ್ಚರಿಕೆ ನೀಡಿದೆ ಎಂದು ರೆಹಮಾನ್ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆ ಸಂಖ್ಯೆಯ ಬಾಲಿವುಡ್‌ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದೇನೆ. ಕೆಲವು ದಿನಗಳ ಹಿಂದೆ ಸುಶಾಂತ್‌ ಸಿಂಗ್‌ ರಜಪೂತ್‌ ಅವರ “ದಿಲ್‌ ಬೆಚರಾ’ ಚಿತ್ರದ ಹಂಸಗೀತೆಗೆ ನಾನು ಸಂಗೀತ ಸಂಯೋಜಿಸಿದ್ದೇನೆ. ನಾನು ಒಳ್ಳೆಯ ಚಲನಚಿತ್ರಗಳನ್ನು ಯಾವತ್ತೂ ತಿರಸ್ಕರಿಸಿಲ್ಲ, ಆದರೆ ಒಂದು ಗ್ಯಾಂಗ್‌ ಇದೆ, ಅದು ತಪ್ಪು ಗ್ರಹಿಕೆಯಿಂದಾಗಿ ಸುಳ್ಳು ವದಂತಿಗಳನ್ನು ಹರಡುತ್ತಿದೆ ಎಂದು ರೆಹಮಾನ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!