newsics.com
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋದರವನ್ನು 35 ಮೂಲಾಂಕದಷ್ಟು ಹೆಚ್ಚಳ ಮಾಡಿದೆ. ಇದರಿಂದ ರೆಪೋ ದರ 6.25ಕ್ಕೆ ಏರಿದಂತಾಗಿದೆ.
ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಗೃಹ, ವಾಹನ, ವಾಣಿಜ್ಯ ಸಾಲದ ಬಡ್ಡಿ ದರ ದುಬಾರಿ ಆಗಲಿವೆ ಎಂದು ಹಣಕಾಸು ತಜ್ಞರು ಮಾಹಿತಿ ನೀಡಿದ್ದಾರೆ.
ಪ್ರಸಕ್ತ ಹಣದುಬ್ಬರ ಅಲ್ಪ ಇಳಿಕೆಯಾಗಿದೆ. ಆದರೆ ಇನ್ನೂ ಪೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರೆಪೋ ಬಡ್ಡಿದರ ಏರಿಕೆ ಮಾಡಲಾಗಿದೆ.
ಆರ್ಬಿಐ ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವನ್ನು ರೆಪೋ ಎಂದು ಕರೆಯಲಾಗುತ್ತಿದೆ. ಹೆಚ್ಚಿನ ಬಡ್ಡಿಗೆ ಸಾಲ ಪಡೆಯುವ ಬ್ಯಾಂಕ್ ಗಳು ಮತ್ತೆ ಅದೇ ಸಾಲವನ್ನು ಬಳಕೆದಾರನಿಗೆ ನೀಡುತ್ತಿವೆ. ಹೆಚ್ಚಿನ ಬಡ್ಡಿಯಲ್ಲಿ ಸಾಲ ನೀಡುತ್ತಿವೆ.
ವಿಶ್ವದ ಬಹುತೇಕ ದೇಶಗಳು ತೀವ್ರವಾದ ಹಣದುಬ್ಬರ ಸಮಸ್ಯೆಯನ್ನು ಎದುರಿಸುತ್ತಿವೆ
ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗು ಸಾವು