ನವದೆಹಲಿ: ಕೆಲವು ಮುಸುಕುಧಾರಿಗಳು ಭಾನುವಾರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಈ ಘಟನೆಯ ಬಗ್ಗೆ ತಕ್ಷಣ ವರದಿ ನೀಡುವಂತೆ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೂಚಿಸಿದ್ದಾರೆ.
ಸಂಜೆ ಮುಖ ಮುಚ್ಚಿಕೊಂಡಿದ್ದ ಸುಮಾರು 50 ಜನರ ಗುಂಪು ವಿವಿ ಆವರಣಕ್ಕೆ ಹಾಗೂ ಹಾಸ್ಟೆಲ್ಗೆ ನುಗ್ಗಿ ಕಲ್ಲು ತೂರಾಟ ನಡೆಸಿತು ಎಂದು ಪ್ರೊಫೆಸರ್ ಅತುಲ್ ಸೂದ್ ತಿಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಷೆ ಘೋಷ್ ಮಾತನಾಡಿ, ಗುಂಪು ಮನಬಂದಂತೆ ಥಳಿಸಿದ್ದು, ರಕ್ತ ಸುರಿಯುತ್ತಿದೆ ಎಂದು ಹೇಳಿದ್ದಾರೆ. ಎಬಿವಿಪಿ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಎಬಿವಿಪಿಯ ಅಧ್ಯಕ್ಷೀಯ ಅಭ್ಯರ್ಥಿ ಮಂಗೀಶ್ ಜಂಗಿದ್ ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ. ಗಲಭೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಜೆಎನ್ ಯು ಗಲಭೆ; ವರದಿ ನೀಡಲು ಅಮಿತ್ ಷಾ ಸೂಚನೆ
Follow Us