newsics.com
ಉತ್ತರಾಖಾಂಡ್: ಉತ್ತರಾಖಂಡ್ ದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹೃಷಿಕೇಶ, ಹರಿದ್ವಾರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಗಂಗಾ, ಭಾಗೀರಥಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಗಳ ದಂಡೆಯಲ್ಲಿರುವ ಹಳ್ಳಿಗಳ ನಿವಾಸಿಗಳನ್ನು ಸಂಬಂಧಪಟ್ಟ ಜಿಲ್ಲಾಡಳಿತಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆ. ಚಮೋಲಿ ಜಿಲ್ಲೆಯ ಅಲಕಾನಂದ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಗಂಗಾ
Follow Us