Monday, October 3, 2022

ಬಿಹಾರ ಫಲಿತಾಂಶ : ಕಾನೂನು ಸಮರಕ್ಕೆ ಆರ್ ಜೆ ಡಿ ಚಿಂತನೆ

Follow Us

Newsics.com

ಪಾಟ್ನ:  ಬಿಹಾರ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಸರಳ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ 125 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಆರ್ ಜೆ ಡಿ ಮೈತ್ರಿಕೂಟ 110 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಇದೇ ವೇಳೆ ಮತ ಎಣಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರ್ ಜೆ ಡಿ ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಕಾನೂನು ಸಮರದ ಮೊರೆ ಹೋಗಲು ಆರ್ ಜೆ ಡಿ ನಾಯಕ ತೇಜಸ್ವಿಯಾದವ್ ನಿರ್ಧರಿಸಿದ್ದಾರೆ.  ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿನ ಅಂತರ 1000 ಮತಗಳಿಗಿಂತ ಕಡಿಮೆಯಾಗಿದೆ.

ಒಂದು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಯು ಅಭ್ಯರ್ಥಿ17 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇನ್ನೊಂದು ಕ್ಷೇತ್ರದಲ್ಲಿ 114 ಮತಗಳ ಅಂತರದಿಂದ  ಜಯಿಸಿದ್ದಾರೆ.  ಇತರ ಕ್ಷೇತ್ರಗಳಲ್ಲಿ ಗೆಲುವಿನ ಅಂತರ 462ರಿಂದ 792 ಮತಗಳಾಗಿವೆ.

ಈ ಕ್ಷೇತ್ರಗಳಲ್ಲಿ ಚುನಾವಣಾಧಿಕಾರಿಗಳು  ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದಿದ್ದಾರೆ ಎಂದು ಆರ್  ಜೆ ಡಿ ಆರೋಪಿಸಿದೆ. ಅಂತಿಮವಾಗಿ  ಎನ್ ಡಿ ಎ ಮೈತ್ರಿಕೂಟ 125, ಆರ್ ಜೆ ಡಿ ನೇತೃತ್ವದ ಮಹಾ ಮೈತ್ರಿಕೂಟ 110  ಮತ್ತು ಇತರರು 8 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!