Wednesday, July 6, 2022

ರಸ್ತೆ ಅಪಘಾತ; 6 ಮಂದಿ ಸಾವು, 20 ಜನರಿಗೆ ಗಾಯ

Follow Us

ಆಗ್ರಾ: ಉತ್ತರ ಪ್ರದೇಶದ ಕನೋಜ್ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ಬಸ್ ಭಾನುವಾರ ಬೆಳಗ್ಗೆ 5 ಗಂಟೆ ವೇಳೆಗೆ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದು ಬಿಹಾರದ ದರ್ಭಾಂಗದಿಂದ ದೆಹಲಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಎರಡೂ ಮಗುಚಿ ಬಿದ್ದಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಸ್ಥಳೀಯ ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ’40 ಪ್ರಯಾಣಿಕರಿದ್ದ ಖಾಸಗಿ ಬಸ್‌ ಹೆದ್ದಾರಿಯಲ್ಲಿ ನಿಂತಿದ್ದ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬಸ್‌ ಉರುಳಿ ಬಿದ್ದು ಸ್ಥಳದಲ್ಲಿಯೇ 5 ಪ್ರಯಾಣಿಕರು ಮೃತಪಟ್ಟಿದ್ದಾರೆ. ಮತ್ತೊಬ್ಬ ಪ್ರಯಾಣಿಕ ಆಸ್ಪತ್ರೆಗೆ ಸೇರಿಸುವುದಕ್ಕೂ ಮುನ್ನ ಸಾವಿಗೀಡಾಗಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಪ್ರಯಾಣಿಕರ ಪರಿಸ್ಥಿತಿ ಗಂಭೀರವಾಗಿದೆ ಎಂದು ಕನೌಜ್‌ ಎಸ್ಪಿ ಅಮರೇಂದ್ರ ಪಿಡಿ ಸಿಂಗ್‌ ಹೇಳಿದ್ದಾರೆ.

ದೆಹಲಿಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!