Thursday, December 2, 2021

ಕೇರಳ , ಕರ್ನಾಟಕ ರಸ್ತೆ ಸಂಪರ್ಕಕ್ಕೆ ಅಡ್ಡಿ: ನಾಳೆ ಸುಪ್ರೀಂ ವಿಚಾರಣೆ

Follow Us

ನವದೆಹಲಿ:  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿರುವ ರಾಜ್ಯದ ಕ್ರಮ ಪ್ರಶ್ನಿಸಿ ಕಾಸರಗೋಡು ಸಂಸತ್ ಸದಸ್ಯ ರಾಜ್ ಮೋಹನ್ ಉಣ್ಣಿತ್ತಾನ್ ಸುಪ್ರೀಂ ಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ರಸ್ತೆ ಬಂದ್ ಮಾಡಿರುವ ಕರ್ನಾಟಕದ ಕ್ರಮ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕೇರಳ ಆರೋಪಿಸಿದೆ. ಇದೇ ವೇಳೆ, ರಾಜ್ಯ ಸರ್ಕಾರ ತನ್ನ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿದೆ. ಕೇರಳದಲ್ಲಿ ಕಾಸರಗೋಡಿನಲ್ಲಿ ಅತೀ ಹೆಚ್ಚು ಕೊರೋನಾ ಸೋಂಕು  ಪ್ರಕರಣ ವರದಿಯಾಗಿದೆ. ಸಂಚಾರಕ್ಕೆ ಮುಕ್ತ ಅವಕಾಶ ನೀಡಿದರೆ ಮಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಲಿದ್ದು, ಪರಿಸ್ಥಿತಿ ನಿಯಂತ್ರಣ ಕಷ್ಟ. ಇದು ಕರ್ನಾಟಕದ ವಾದ ವಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!