ಮುಂಬೈ: ರೋಸ್ ವ್ಯಾಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮುಂದುವರೆಸಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಆಸ್ತಿ ಜಪ್ತಿ ಮಾಡಲಾಗಿದೆ.
ಮನಿ ಲಾಂಡ್ರಿಂಗ್ ನಿಯಂತ್ರಣ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು, 70.11 ಕೋಟಿ ರೂ. ಜಪ್ತಿ ಮಾಡಿಕೊಂಡಿದೆ.
ಅಲ್ಲದೆ, ನಟ ಶಾರುಖ್ ಖಾನ್ ಒಡೆತನದ ಐಪಿಎಲ್ ಕ್ರಿಕೆಟ್ ತಂಡ ನಿರ್ವಹಿಸುವ ಕಂಪನಿ ಸೇರಿ ಮೂರು ಕಂಪನಿಗಳ ಮೇಲೆ ದಾಳಿ ನಡೆಸಿ 70 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಿನಿಮಾ ನಟ, ನಟಿಯರ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ರೋಸ್ ವ್ಯಾಲಿ ವಂಚನೆ ಕೇಸ್: ಇಡಿಯಿಂದ ನಟ ಶಾರುಖ್ ಆಸ್ತಿ ಜಪ್ತಿ
Follow Us