Monday, August 8, 2022

ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಜಯಭೇರಿ

Follow Us

newsics.com
ಅಬುಧಾಬಿ: ಇಲ್ಲಿ ಶನಿವಾರ ನಡೆದ ಐಪಿಎಲ್​ನ 15 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲುವಿನ ರಾಯಲ್ ಚಾಲೆಂಜರ್ಸ್ ಗೆಲುವಿನ ಜಯಭೇರಿ ಭಾರಿಸಿದೆ.
ಟಾಸ್ ಗೆದ್ದ ಆರ್​​ಆರ್​ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡು 154 ರನ್ ಗಳಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಆರಂಭದಲ್ಲಿ ನಾಯಕ ಸ್ಟೀವ್ ಸ್ಮಿತ್ ಕೇವಲ 5 ರನ್ ಗಳಿಸಿ ಔಟಾದರು. ನಂತರ ಜೋಸ್ ಬಟ್ಲರ್ ಕೂಡ 22 ರನ್ ಗಳಿಸಿ ನವದೀಪ್ ಸೈನಿ ಬೌಲಿಂಗ್‌ನಲ್ಲಿ ಔಟಾದರು.
155 ಗುರಿ ಬೆನ್ನಟ್ಟಿದ್ದ ಆರ್​ಸಿಬಿ 19.1 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿದೆ, ದೇವದತ್ ಪಡಿಕಲ್ 63 ಮತ್ತು ವಿರಾಟ್ ಕೊಹ್ಲಿ 72 ರನ್ ಗಳಿಸಿದ್ದು, ಆರನ್ ಫಿಂಚ್ 8 ಮತ್ತು ಎಬಿ ಡಿವಿಲಿಯರ್ಸ್ 12 ರನ್ ಗಳಿಸಿದರು. 45 ಎಸೆತಗಳಲ್ಲಿ 63 ರನ್ ಗಳಿಸಿದ್ದ ದೇವದತ್ ಪಡಿಕಲ್ ಜೋಫ್ರಾ ಆರ್ಚರ್ ಬೌಲಿಂಗ್‌ನಲ್ಲಿ ಔಟಾದರು. ನಂತರ ವಿರಾಟ್ ಕೊಹ್ಲಿ ಜೊತೆ ಎಬಿ ಡಿ ವಿಲಿಯರ್ಸ್ ಕಣಕ್ಕಿಳಿದಿದ್ದು, ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ (72)ರನ್ ಗಳಿಸಿದರೆ ಎಬಿ ಡಿ ವಿಲಿಯರ್ಸ್ 12 ರನ್ ಗಳಿಸಿದರು. 19.1 ಓವರ್ ನಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 158 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!