newsics.com
ಪುಣೆ: ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ ಸಂಭಾವ್ಯ ಕೊರೋನಾ ಲಸಿಕೆ ಎಲ್ಲ ಭಾರತೀಯರಿಗೆ ಸಿಗುವಂತಾಗಲು 80 ಸಾವಿರ ಕೋಟಿ ಬೇಕೆಂದು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ಐಐ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನವಾಲಾ ಹೇಳಿದ್ದಾರೆ.
ಇಷ್ಟು ಹಣ ಭಾರತ ಸರ್ಕಾರದ ಬಳಿ ಇದೆಯೇ ಎಂದೂ ಪೂನಾವಾಲಾ ಪ್ರಶ್ನಿಸಿದ್ದಾರೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸುತ್ತಿರುವ ಲಸಿಕೆಯ ಉತ್ಪಾದನೆಯ ಹೊಣೆಯನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ಐಐ) ಹೊತ್ತಿದೆ.
ಭಾರತದಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಸಿಕ್ಕುವಂತಾಗಲು 80 ಸಾವಿರ ಕೋಟಿ ಅಗತ್ಯವಿದೆ ಪೂನಾವಾಲಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್’ಗೆ ಪ್ರಧಾನಮಂತ್ರಿ ಕಚೇರಿಯನ್ನು ಟ್ಯಾಗ್ ಮಾಡಿದ್ದಾರೆ.
ಬ್ರಿಟಿಷ್-ಸ್ವೀಡಿಷ್ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ ಸಹಯೋಗದೊಂದಿಗೆ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಜೆನ್ನರ್ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ ಸಂಭಾವ್ಯ ಲಸಿಕೆಯನ್ನು ತಯಾರಿಸಲು ಎಸ್ಐಐ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತ ಸೇರಿದಂತೆ ಕಡಿಮೆ ಮತ್ತು ಮಧ್ಯಮ ಆರ್ಥಿಕತೆಯ ದೇಶಗಳಿಗೆ ಆಕ್ಸ್ಫರ್ಡ್ ಲಸಿಕೆ 3 ಡಾಲರ್ಗೆ ಲಭ್ಯವಾಗುವಂತೆ ಮಾಡುತ್ತೇವೆಂದು ಎಸ್ಐಐ ಈ ಹಿಂದೆ ಘೋಷಿಸಿತ್ತು.
ದೇಶದ ಎಲ್ಲರಿಗೂ ಕೊರೋನಾ ಲಸಿಕೆ ನೀಡಲು 80 ಸಾವಿರ ಕೋಟಿ ರೂ. ಬೇಕಂತೆ..!
Follow Us