newsics.com
ತಿರುವನಂತಪುರ: ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 10ಕ್ಕೆ ಏರಿದೆ.
ಮುಂಜಾನೆ ಮನೆಯಿಂದ ಪತ್ನಿ ಜತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಸಂಜಿತ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು.
ಕೇರಳ ಸರ್ಕಾರ ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಎನ್ ಐ ಎ ತನಿಖೆಗೆ ಬಿಜೆಪಿ ಆಗ್ರಹಿಸಿತ್ತು.
ನಿಗದಿತ ಸ್ಥಳದಲ್ಲಿ ಪಾದಚಾರಿಗಳು ರಸ್ತೆ ಕ್ರಾಸ್ ಮಾಡಬೇಕು, ಇಲ್ಲದಿದ್ದರೆ ದಂಡ