ನವದೆಹಲಿ: ಜೆಎನ್ ಯು ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುವವರು ‘ಟುಕ್ಡೆ ಟುಕ್ಡೆ ಗ್ಯಾಂಗ್’ ಎಂದು ಹೇಳಿಕೆ ನೀಡಿದ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಗೃಹ ಸಚಿವಾಲಯಕ್ಕೆ ಸಂಕಷ್ಟ ತಂದಿಟ್ಟಿದ್ದಾರೆ.
ಹಿರಿಯ ಪತ್ರಕರ್ತ ಸಾಕೇತ್ ಗೋಕಲೇ ಅವರು ಟುಕ್ಡೆ ಟುಕ್ಡೆ ತಂಡದಲ್ಲಿ ಯಾರಿದ್ದಾರೆ ಎಂಬುದರ ಮಾಹಿತಿ ಕೋರಿ ಗೃಹ ಸಚಿವಾಲಯಕ್ಕೆ ಮಾಹಿತಿ ಹಕ್ಕು ಅಧಿನಿಯಮದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ದೊರೆಯದಿದ್ದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿಯೂ ಅವರು ಎಚ್ಚರಿಸಿದ್ದಾರೆ.