ನವದೆಹಲಿ: ಶಬರಿಮಲೆ ದೇವಸ್ಥಾನದಲ್ಲಿ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾವುದೇ ಪುನರ್ ಪರಿಶೀಲನಾ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಬದಲಾಗಿ ಸುಪ್ರೀಂ ಕೋರ್ಟಿನ ಐದು ಮಂದಿ ಸದಸ್ಯರನ್ನೊಳಗೊಂಡ ಪೀಠ ಸೂಚಿಸಿರುವ ಏಳು ಪ್ರಶ್ನೆಗಳ ಕುರಿತು ಮಾತ್ರ ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ನೇತೃತ್ವದ 9 ಸದಸ್ಯರ ನ್ಯಾಯಪೀಠ ಇದನ್ನು ಸ್ಪಷ್ಟಪಡಿಸಿದೆ. ನ್ಯಾಯಾಲಯದ ಸಮಯ ವ್ಯರ್ಥವಾಗಬಾರದು. ಈ ಹಿನ್ನೆಲೆಯಲ್ಲಿ ಅನಗತ್ಯ ವಾದ ಬೇಡ. ಸಮಯ ಪರಿಮಿತಿಯಲ್ಲಿ ವಾದ ಮಂಡನೆ ಮಾಡಬೇಕು ಎಂದು ನ್ಯಾಯಾಲಯ ಸೂಚಿಸಿದೆ.