newsics.com
ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಆರಂಭದ ದಿನಗಳಲ್ಲಿ ಪ್ರತಿ ದಿನ 25,000 ಭಕ್ತರಿಗೆ ಅವಕಾಶ ನೀಡಲು ಕೇರಳ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಭಕ್ತರು ಎರಡು ಡೋಸ್ ಕೊರೋನಾ ಲಸಿಕೆ ಪಡೆದಿರಬೇಕು. ಇಲ್ಲದಿದ್ದರೆ ಕೊರೋನಾ ನೆಗೆಟಿವ್ ವರದಿ ಹೊಂದಿರಬೇಕಾಗಿದೆ.
ನವೆಂಬರ್ 16ರಿಂದ ಶಬರಿಮಲೆ ದೇವಸ್ಥಾನದಲ್ಲಿ ಮಂಡಲ ವಿಳಕ್ಕ್ ಪೂಜೆ ಆರಂಭವಾಗಲಿದೆ.