Wednesday, October 5, 2022

ಡಿಸೆಂಬರ್ 1ರಿಂದ ವಿಪ್ರೋದ 1.5 ಲಕ್ಷ ಸಿಬ್ಬಂದಿ ವೇತನ ಹೆಚ್ಚಳ

Follow Us

Newsics.com

ಬೆಂಗಳೂರು: ದೇಶದ ನಾಲ್ಕನೇ ಅತಿ ದೊಡ್ಡ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾಗಿರುವ ವಿಪ್ರೋ, ತನ್ನ 1.5 ಲಕ್ಷ ಸಿಬ್ಬಂದಿಯ ವೇತನ ಹೆಚ್ಚಳಕ್ಕೆ ತೀರ್ಮಾನಿಸಿದೆ.  ಇದು ಡಿಸೆಂಬರ್ 1ರಿಂದ ಜಾರಿಗೆ ಬರಲಿದೆ. ಕೊರೋನಾ ಮಹಾ ಮಾರಿಯ ಮಧ್ಯೆ  ನಿರಂತರವಾಗಿ ಸೇವೆ ಖಾತರಿಪಡಿಸಿದ್ದಕ್ಕೆ ಪ್ರತಿಯಾಗಿ ಸಂಸ್ಥೆ ಈ ಉಡುಗೊರೆ ನೀಡಲು ತೀರ್ಮಾನಿಸಿದೆ.

ವಿಪ್ರೋದಲ್ಲಿ 1. 85 ಲಕ್ಷ ಸಿಬ್ಬಂದಿ ಸೇವೆಯಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ. ಇವರಲ್ಲಿ ಬಿ-2 ಮತ್ತು ಅದರ ಕೆಳಗಿನ ಶ್ರೇಣಿಯಲ್ಲಿರುವ ಸಿಬ್ಬಂದಿ ವೇತನ ಹೆಚ್ಚಳವಾಗಲಿದೆ. ಹಿರಿಯ ಸಿಬ್ಬಂದಿ ವೇತನ ಹೆಚ್ಚಳ ಕುರಿತಂತೆ ಇದುವರೆಗೆ ಸಂಸ್ಥೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ದೇಶದಲ್ಲಿ ಆರ್ಥಿಕ ಚಟುವಟಿಕೆ ಚೇತರಿಸಿಕೊಳ್ಳುತ್ತಿರುವ ಮುನ್ಸೂಚನೆ ನೀಡಿದ್ದು, ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು ಇದನ್ನು ನಿಕಟವಾಗಿ ಅವಲೋಕಿಸುತ್ತಿವೆ. ಕಳೆದ ವಾರ ರಿಲಯನ್ಸ್ ಇಂಡಸ್ಟ್ರೀಸ್   ಕಡಿತಗೊಳಿಸಿದ್ದ ವೇತನವನ್ನು  ನೀಡುವುದಾಗಿ ಪ್ರಕಟಿಸಿತ್ತು.

ಇದರ ಜತೆ ಜತೆಗೆ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ನೇಮಕಾತಿ  ಪ್ರಕ್ರಿಯೆ ಕೂಡ ಆರಂಭವಾಗಿದೆ. ಮನೆಯಿಂದಲೇ ಕೆಲಸ ನಿರ್ವಹಣೆಯ ಪರವಾಗಿ ಕೇಂದ್ರ ಸರ್ಕಾರ ಒಲವು ಹೊಂದಿದ್ದು, ಇದು ಕೂಡ ಹೊಸ ಭರವಸೆ ಮೂಡಿಸಿದೆ.

ಒಂದೇ ದಿನ 45, 903 ಮಂದಿಗೆ ಕೊರೋನಾ ಸೋಂಕು, 490 ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!