newsics.com
ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ.
ಗುಜರಾತ್ನ ಮೊರ್ಬಿ ಜಿಲ್ಲೆಯ ಹಲ್ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ.
ಗುಜರಾತ್ನ ಕೈಗಾರಿಕಾ ಸಚಿವ ಬೃಜೇಶ್ ಮೆರ್ಜಾ ಈ ಮಾಹಿತಿ ನೀಡಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12 ಕಾರ್ಮಿಕರು ಸಾವು
Follow Us