newsics.com
ಉತ್ತರಪ್ರದೇಶ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಮುಲಾಯಂ ಸಿಂಗ್ ಯಾದವ್ ಪ್ರತಿಮೆ ತೆರವು ಮಾಡಿದೆ.
ಹರ್ದೋಯಿ ಜಿಲ್ಲಾ ಕೇಂದ್ರದಲ್ಲಿ ಸಮಾಜವಾದಿ ಪಕ್ಷದ ಕಚೇರಿ ಬಳಿ ಮುಲಾಯಂ ಸಿಂಗ್ ಯಾದವ್ ಅವರ 6 ಅಡಿ ಎತ್ತರದ ಪ್ರತಿಮೆಯನ್ನು ಪೀಠವೊಂದರ ಮೇಲೆ ಪ್ರತಿಷ್ಠಾಪನೆ ಮಾಡಲಾಗಿತ್ತು.
ಹರ್ದೋಯಿ ನಗರ ಪಾಲಿಕೆ ಕಚೇರಿ ಬಳಿಯಲ್ಲೇ ಸಮಾಜವಾದಿ ಪಕ್ಷದ ಕಚೇರಿ ಕೂಡಾ ಇದೆ. ಈ ಪ್ರತಿಮೆಯನ್ನು ನಿರ್ಮಾಣ ಮಾಡುವ ಮುನ್ನ ಸಮಾಜವಾದಿ ಪಕ್ಷದ ನಾಯಕರು ಅಧಿಕೃತವಾಗಿ ಪಾಲಿಕೆ ಬಳಿ ಅನುಮತಿ ಪಡೆದಿರಲಿಲ್ಲ ಎಂದು ತಿಳಿಸಿರುವ ಅಧಿಕಾರಿಗಳು, ಪ್ರತಿಮೆಯನ್ನು ತೆರವು ಮಾಡಿದ್ದಾರೆ ಎನ್ನಲಾಗಿದೆ.