ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 70ನೇ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ದೇಶದ ಗಣ್ಯಾತಿಗಣ್ಯರು ಈ ಸಂದರ್ಭದಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.
ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ತಮ್ಮದೇ ಆದ ರೀತಿಯಲ್ಲಿ ಪ್ರಧಾನಿಗೆ ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರ ಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ. ಇಧು ಆಕರ್ಷಕವಾಗಿ ಮೂಡಿ ಬಂದಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.