ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಈ ಹಿಂದೆ ನ್ಯಾಯಾಲಯದ ರಿಜಿಸ್ಟ್ರಾರ್ ಬಳಿ ಠೇವಣಿ ಇಟ್ಟಿದ್ದು 20 ಕೋಟಿ ರೂ.ಗಳನ್ನು ಹಿಂಪಡೆಯಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
2019ರ ಜನವರಿ ಹಾಗೂ ಮೇ ತಿಂಗಳಲ್ಲಿ ವಿದೇಶಿ ಪ್ರವಾಸ ಕೈಗೊಳ್ಳಲು ತಲಾ 10 ಕೋಟಿ ರೂ. ಗಳನ್ನು ರಿಜಿಸ್ಟ್ರಾರ್ ಬಳಿ ಠೇವಣಿ ಇಡುವಂತೆ ಕಾರ್ತಿ ಚಿದಂಬರಂ ಅವರಿಗೆ ನ್ಯಾಯಾಲಯ ಸೂಚಿಸಿತ್ತು. ಈಗಾಗಲೇ ಅವರು ವಿದೇಶಿ ಪ್ರವಾಸದಿಂದ ಹಿಂದಿರುಗುವುದರಿಂದ ಠೇವಣಿ ಹಿಂಡಪೆಯಲು ಯಾವುದೇ ಆಕ್ಷೇಪಣೆ ಇಲ್ಲವೆಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.