ನವದೆಹಲಿ: ದೇಶದಲ್ಲಿ ಕೊರೋನಾ ಮಹಾ ಮಾರಿ ಕಾಲಿಟ್ಟ ಸಂದರ್ಭದಲ್ಲಿ ಗುಜರಾತಿನ ಅಹ್ಮದಾಬಾದ್ ನಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಆಯೋಜಿಸಿದ್ದ ಕುರಿತು ತನಿಖೆ ನಡೆಸಬೇಕು ಎಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಈ ಕುರಿತು ತನಿಖೆಗೆ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿದಾರರ ಪರ ವಾದ ಮಂಡಿಸಿದರು. ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕ ಪಕ್ಷೀಯವಾಗಿ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಕುರಿತು ಕೂಡ ತನಿಖೆ ನಡೆಯಬೇಕು ಎಂದು ಪ್ರಶಾಂತ್ ಭೂಷಣ್ ನ್ಯಾಯಾಲಯದಲ್ಲಿ ವಾದಿಸಿದರು.
ವಾದ ಪ್ರತಿವಾದ ಆಲಿಸಿದ ಸರ್ವೋಚ್ಚ ನ್ಯಾಯಾಲಯ ಅಂತಿಮವಾಗಿ ಈ ಬೇಡಿಕೆಯನ್ನು ತಿರಸ್ಕರಿಸಿತು.