ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬೋಬ್ಡೆ, ಮಹಾತ್ಮಾ ಗಾಂಧೀಜಿ ಅವರು ಭಾರತ ರತ್ನದಂತಹ ಔಪಚಾರಿಕ ಪ್ರಶಸ್ತಿಗಳನ್ನು ಮೀರಿದ ವ್ಯಕ್ತಿ ಮಿಗಿಲಾದವರು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.