ನವದೆಹಲಿ: ಪೌರತ್ವ ಕಾನೂನು ಜಾರಿ ವಿರುದ್ಧ ತಡೆಯಾಜ್ಞೆ ನೀಡಬೇಕೇಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಕೇಂದ್ರ ಸರ್ಕಾರದ ಅಭಿಪ್ರಾಯಗಳನ್ನು ಪರಿಗಣಿಸದೇ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಸಂಬಂಧ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್ . ಎ . ಬೊಬ್ಡೆ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪರಿಷ್ಕೃತ ಪೌರತ್ವ ಕಾನೂನು ವಿರೋಧಿಸಿ ಸಲ್ಲಿಸಲಾಗಿದ್ದ 100ಕ್ಕೂ ಹೆಚ್ಚು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ