ನವದೆಹಲಿ: ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.
ತಮ್ಮ ಕ್ಷಮಾದಾದ ಅರ್ಜಿಯನ್ನು ತಿರಸ್ಕರಿಸಿದ್ದ ರಾಷ್ಟ್ರಪತಿ ರಾಮಬಾಥ್ ಕೋವಿಂದ್ ಪ್ರಶ್ನಿಸಿ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠ ವಜಾಗೊಳಿಸಿತು. ಪ್ರಕರಣದ ನಾಲ್ವರು ಅಪರಾಧಿಗಳಾದ ಅಕ್ಷಯ್ ಮತ್ತು ಮುಖೇಶ್ ಸಿಂಗ್ , ವಿನಯ್ ಶರ್ಮಾ (26) ಮತ್ತು ಪವನ್ ಗುಪ್ತಾ (26) ಅವರುಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವ ಬಗ್ಗೆ ಸಮಯ ನಿಗದಿಯಾಗಿದೆ.
ನಿರ್ಭಯಾ ಪ್ರಕರಣ: ಅಪರಾಧಿ ಮುಖೇಶ್ ಮನವಿ ತಿರಸ್ಕೃತ
Follow Us