newsics.com
ಭೋಪಾಲ್: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಬಲವಂತವಾಗಿ ಹಿಜಾಬ್ ಧರಿಸುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಆರೋಪ ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರ ಈ ಕುರಿತು ತನಿಖೆಗೆ ಆದೇಶಿಸಿದೆ.
ಗೃಹ ಸಚಿವ ನರೋತ್ತಮ್ ಮಿಶ್ರಾ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಯೂ ವಿಚಾರದ ಬಗ್ಗೆ ತನಿಖೆ ನಡೆಸುತ್ತಿದ್ದು ಈ ಕುರಿತು ಯಾವುದೇ ದೂರುಗಳು ದಾಖಲಾಗಿಲ್ಲ. ಸಮಸ್ಯೆಯ ಗಂಭೀರತೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಗಂಗಾ ಜಮುನಾ ಹೈಯರ್ ಸೆಕಂಡರಿ ಶಾಲೆಯ ಬ್ಯಾನರ್ ಒಂದರಲ್ಲಿ ಹಿಂದೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವ ಫೋಟೋಗಳು ವೈರಲ್ ಆಗಿವೆ.
ಲವ್ ಜಿಹಾದ್ನಲ್ಲಿ ಸಿಲುಕಿದ್ದೇನೆ ರಕ್ಷಿಸಿ ಎಂದು ಮೋದಿಗೆ ಮನವಿ ಮಾಡಿದ ಮಾಡೆಲ್