Sunday, July 3, 2022

ಅಕ್ಟೋಬರ್ 15ರಿಂದ ಶಾಲಾ-ಕಾಲೇಜು ಪುನಾರಂಭ

Follow Us

ಆಂಧ್ರಪ್ರದೇಶ: ಕೊರೋನಾದಿಂದ ಬಾಗಿಲು ಮುಚ್ಚಿರುವ ಶಾಲಾ-ಕಾಲೇಜುಗಳನ್ನು ಅಕ್ಟೋಬರ್ 15ರಿಂದ ಪುನಾರಂಭ ಮಾಡಲು ಸಿದ್ಧರಾಗುವಂತೆ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ.
ಈ ಬಗ್ಗೆ ಶಾಲಾ-ಕಾಲೇಜು ಉನ್ನತ ಸಮಿತಿಗಳ ಜೊತೆ ಇತ್ತೀಚಿಗೆ ಸಭೆ ನಡೆಸಿದ ಸಿಎಂ ಜಗನ್ ಮೋಹನ್ ರೆಡ್ಡಿ, ಶಾಲಾ-ಕಾಲೇಜುಗಳನ್ನು ಪುನಃ ಆರಂಭಿಸುವ ನಿರ್ದಿಷ್ಟ ದಿನಾಂಕ ಹಾಗೂ ಮಾರ್ಗಸೂಚಿಗಳನ್ನು ಸದ್ಯದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ‌ ಕಳೆದ ಮಾರ್ಚ್’ನಿಂದ ಶಾಲೆ-ಕಾಲೇಜುಗಳು ಬಾಗಿಲು ಮುಚ್ಚಿದ್ದು, ಈಗಾಗಲೇ ನಾಡು-ನೇಡು ಕಾರ್ಯಕ್ರಮದ ಅಡಿಯಲ್ಲಿ 456 ಕೋಟಿ ವೆಚ್ಚದಲ್ಲಿ 15 ಸಾವಿರ ಶಾಲೆಗಳನ್ನು ದುರಸ್ತಿಗೊಳಿಸಲು ಸಿಎಂ ಕಾರ್ಯಯೋಜನೆ ರೂಪಿಸಿ ಯಶಸ್ವಿಯಾಗಿದ್ದಾರೆ.
ಮೊದಲು ಅಗಸ್ಟ್ 3 ರಿಂದ ಶಾಲೆ ಆರಂಭಿಸಲು ಚಿಂತನೆ ನಡೆದಿತ್ತು. ಆದರೆ ಕೊರೋನಾ ಸೋಂಕಿನ ಪ್ರಮಾಣ ಗಮನಿಸಿ ಅಕ್ಟೋಬರ್ 15ಕ್ಕೆ ಮುಂದೂಡಲು ತೀರ್ಮಾನಿಸಲಾಗಿದೆ.

ಕೋಳಿಕ್ಕೋಡ್’ನಲ್ಲಿ ವಿಮಾನ ದುರಂತ; ತನಿಖೆಗೆ ಆದೇಶ

ಆಂಧ್ರಪ್ರದೇಶದಲ್ಲಿ ಒಟ್ಟೂ 1 ಲಕ್ಷ 96 ಸಾವಿರ ಕೊವಿಡ್-19 ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 1753 ಜನರು ಸಾವನ್ನಪ್ಪಿದ್ದಾರೆ‌.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!