Wednesday, October 5, 2022

ತಮಿಳುನಾಡಿನಲ್ಲಿ ಶಾಲೆ ಆರಂಭ ಮತ್ತೆ ಮುಂದೂಡಿಕೆ

Follow Us

Newsics.com

ಚೆನ್ನೈ: ತಮಿಳುನಾಡಿನಲ್ಲಿ ದೀಪಾವಳಿಯ ಬಳಿಕ ನವೆಂಬರ್ 16ರಿಂದ ಶಾಲೆ ಆರಂಭಿಸುವ ಪ್ರಸ್ತಾಪವನ್ನು ಕೈ ಬಿಡಲಾಗಿದೆ. ಈ ಹಿಂದೆ ನವೆಂಬರ್ 16ರಿಂದ  9 ರಿಂದ ಪಿಯುಸಿ ವರೆಗಿನ ತರಗತಿ ಆರಂಭಿಸಲು ನಿರ್ಧರಿಸಲಾಗಿತ್ತು. ಪೋಷಕರಿಂದ ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ.

ತಮಿಳುನಾಡಿನಲ್ಲಿ ಕೊರೋನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಚೆನ್ನೈನಲ್ಲಿ ಪರಿಸ್ಥಿತಿ ಈಗಲೂ ಗಂಭೀರವಾಗಿದೆ. ಶಾಲಾ ಕಾಲೇಜು ಆರಂಭಿಸಿದರೆ ಸಮಸ್ಯೆ ಇನ್ನಷ್ಟು ಗಂಭೀರ ಸ್ವರೂಪ ಪಡೆಯಲಿದೆ ಎಂದು ಪೋಷಕರು ಆತಂಕ ವ್ಯಕ್ತಪ಼ಡಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ಶಾಲೆ ಆರಂಭಿಸಿದ ಬಳಿಕ ಮಕ್ಕಳು  ಕೊರೋನಾ ಸೋಂಕಿಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಆ ಆತಂಕ ವ್ಯಕ್ತವಾಗಿದೆ.

ರಾಜ್ಯದಲ್ಲಿ ಶಾಲಾ ಕಾಲೇಜು ಪುನರಾರಂಭಕ್ಕೆ ಸಿದ್ದತೆ ನಡೆಯುತ್ತಿರುವಾಗಲೇ, ನೆರೆಯ ತಮಿಳುನಾಡು ಶಾಲೆ ಆರಂಭಿಸುವುದನ್ನು ಸದ್ಯಕ್ಕೆ ಕೈ ಬಿಟ್ಟಿದೆ. ಮುಂದಿನ ದಿನಾಂಕ ಶೀಘ್ರ ಪ್ರಕಟಿಸುವುದಾಗಿ ತಮಿಳುನಾಡು ಶಿಕ್ಷಣ ಸಚಿವರು ಘೋಷಿಸಿದ್ದಾರೆ.

ಜನರ ಮೂಲ ಭೂತ ಹಕ್ಕುಗಳನ್ನು ಗೌರವಿಸಿ: ಪಾಕಿಸ್ತಾನಕ್ಕೆ ಬ್ರಿಟನ್ ಸಲಹೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!