Monday, July 4, 2022

ಆಂಧ್ರದಲ್ಲಿ ಸೆ.5ರಿಂದ ಶಾಲೆಗಳು ಪುನಾರಂಭ

Follow Us

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸೆಪ್ಟೆಂಬರ್ 5ರಿಂದ ಶಾಲೆಗಳು ಪುನಾರಂಭಗೊಳ್ಳಲಿವೆ.
ರಾಜ್ಯಾದ್ಯಂತ ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ಆಂಧ್ರಪ್ರದೇಶ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯೊಂದಿಗೆ ಶಾಲೆಗಳು ಪುನಾರಂಭಗೊಳ್ಳಲಿವೆ ಎಂದು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.
ಅದೇ ದಿನ, ವೈ.ಎಸ್.ಆರ್. ವಿದ್ಯಾ ಕನುಕಾ ಯೋಜನೆಗೆ ಚಾಲನೆ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಶಾಲೆ ಆರಂಭದ ದಿನವೇ ಸ್ಕೂಲ್ ಬ್ಯಾಗ್, ಪಠ್ಯಪುಸ್ತಕ, ನೋಟ್ ಬುಕ್, ಮೂರು ಜತೆ ಸಮವಸ್ತ್ರ ಬಟ್ಟೆ, ಒಂದು ಜೊತೆ ಬೂಟು, ಎರಡು ಜೊತೆ ಸಾಕ್ಸ್ ಮತ್ತು ಬೆಲ್ಟ್ ಒಳಗೊಂಡ ಕಿಟ್ ನೀಡಲಾಗುವುದು.
ಕಿಟ್’ನಲ್ಲಿ ಮಾಸ್ಕ್’ಗಳನ್ನೂ ನೀಡಲಿದ್ದು, ಅವುಗಳನ್ನು ಬಳಸುವ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೆಪ್ಟೆಂಬರ್ 5ರ ವೇಳೆಗೆ ಪರಿಸ್ಥಿತಿ ಸುಧಾರಿಸಬಹುದು. ಶಿಕ್ಷಕರ ದಿನಾಚರಣೆಯೊಂದಿಗೆ ಶಾಲೆಗಳ ಪುನಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದೇ ದಿನ ವೈ.ಎಸ್.ಆರ್. ವಿದ್ಯಾ ಕನುಕಾ ಯೋಜನೆಯಡಿ ಮಕ್ಕಳಿಗೆ ಪಠ್ಯ ಪರಿಕರಗಳನ್ನೊಳಗೊಂಡ ಕಿಟ್ ವಿತರಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!