Saturday, April 17, 2021

ಪಕ್ಕದ ಏರಿಯಾಗಳೆಲ್ಲ ಸೀಲ್’ಡೌನ್; ಆದರೂ ತಾಜ್ ಮಹಲ್ ಶೀಘ್ರ ಓಪನ್!

ನವದೆಹಲಿ: ದೆಹಲಿಯಲ್ಲಿ ಕೊರೋನಾ ಸೋಂಕು ಉಲ್ಬಣಿಸುತ್ತಿದ್ದು ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಿರುವಾಗಲೇ ಪ್ರವಾಸೋದ್ಯಮ ಇಲಾಖೆ ಐತಿಹಾಸಿಕ ತಾಜ್ ಮಹಲ್ ಭೇಟಿಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಸರ್ಕಾರದ ನಿರ್ಧಾರ ಇದೀಗ ಟೀಕೆ ಹಾಗೂ ಚರ್ಚೆಗೆ ಗ್ರಾಸವಾಗಿದೆ.
ಕೊವೀಡ್ ಪ್ರಮಾಣ‌ ಹೆಚ್ಚಿ ಲಾಕ್ ಡೌನ್ ಜಾರಿಯಾದ ಮೂರು ತಿಂಗಳಿನಿಂದ ತಾಜ್ ಮಹಲ್ ಪ್ರವಾಸಿಗರಿಗೆ ಮುಚ್ಚಿತ್ತು. ಆದರೇ ಇದೀಗ ಮಾಸ್ಕ್ ಕಡ್ಡಾಯ ಹಾಗೂ ಐತಿಹಾಸಿಕ ತಾಜ ಮಹಲನ್ನು ಕೈಯಲ್ಲಿ ಮುಟ್ಟುವಂತಿಲ್ಲ ಎಂಬ ನಿಯಮಗಳ ಅಡಿಯಲ್ಲಿ ಪ್ರತಿನಿತ್ಯ ಕೇವಲ 5 ಸಾವಿರ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಇಲಾಖೆ ನಿರ್ಧರಿಸಿದೆ.
17ನೇ ಶತಮಾನಕ್ಕೆ ಸೇರಿದ್ದು ಎನ್ನಲಾಗುವ ಈ ಪ್ರೇಮ ಸ್ಮಾರಕ ನೋಡಲು ಪ್ರತಿನಿತ್ಯ ಕನಿಷ್ಠ 80 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಈಗ ಕೇವಲ 5 ಸಾವಿರ ಪ್ರವಾಸಿಗರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದ್ದು, ಅವರನ್ನು ಪರಸ್ಪರ ಅಂತರ ಕಾಪಾಡುವ ನಿಯಮದೊಂದಿಗೆ ಗುಂಪು ಗುಂಪುಗಳಲ್ಲಿ ವಿಂಗಡಿಸಿ ಒಳಕ್ಕೆ ಕಳಿಸಲಾಗುತ್ತದೆ.
ನವದೆಹಲಿಯ ತಾಜ್ ಮಹಲ್‌ಮಾತ್ರವಲ್ಲದೇ ಕೆಂಪುಕೋಟೆ ಸೇರಿದಂತೆ ಹಲವು ಸ್ಥಳಗಳನ್ನು ಪ್ರವಾಸಿಗರಿಗೆ ತೆರೆಯುವ ಅಪಾಯಕ್ಕೆ ಆಹ್ವಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಮೂಲಗಳ ಪ್ರಕಾರ ಉತ್ತರ ಪ್ರದೇಶ ಹಾಗೂ ತಾಜ್ ಮಹಲ್ ಇರುವ ಆಗ್ರಾ ಪ್ರದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು ತಾಜ್ ಮಹಲ್ ಪಕ್ಕದ ಏರಿಯಾಗಳು ಸೀಲ್ ಡೌನ್ ಆಗಿದೆ. ಅಲ್ಲದೇ ಅಕ್ಕಪಕ್ಕದ ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆ. ಇಂತ ಸಂದರ್ಭದಲ್ಲಿ ಸರ್ಕಾರದ ಈ ತೀರ್ಮಾನ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!